ವಚನ - 1377     
 
ಬಿಂದುವೆ ಪೀಠವಾಗಿ, ನಾದವೇ ಲಿಂಗವಾದಡೆ ಅದು ಭಿನ್ನಲಿಂಗ ನೋಡಾ. ಕಳೆ ಎಂಬ ಪೂಜೆ ನಿರ್ಮಾಲ್ಯವಾಗಿ, ನಾದಬಿಂದುಕಳಾತೀತ ನೋಡಾ ಮಹಾಘನವು. ಅಲ್ಲಿ ಇಲ್ಲಿ ಸಿಲುಕಿದ ಅಚಲವಪ್ಪ ನಿರಾಳವ ಪ್ರಣವರೂಪೆಂದು ಹೆಸರಿಡಬಹುದೆ? ನಮ್ಮ ಗುಹೇಶ್ವರನ ನಿಲುವು `ನಿಶ್ಯಬ್ದಂ ಬ್ರಹ್ಮ ಉಚ್ಯತೇ' ಎಂಬುದನರಿಯಾ ಸಿದ್ಧರಾಮಯ್ಯಾ?