Index   ವಚನ - 180    Search  
 
ಶ್ರೀಗುರು ಶಿವಗಣಂಗಳ ಮಧ್ಯದಲ್ಲಿ ಎನಗೆ ಉಪದೇಶಿಸುವಲ್ಲಿ ಪರಮೇಶ್ವರನ ಪಂಚಮುಖವನೆ ಪಂಚಕಳಶವಾಗಿ ಮೂರ್ತಿಗೊಳಿಸಿ, ಗಣಂಗಳು ಸಾಕ್ಷಿಯಾಗಿ ಕರಸ್ಥಲಕ್ಕೆ ಶಿವಲಿಂಗವ ಕೊಟ್ಟು `ಈ ಲಿಂಗವೆ ಗಂಡ, ನೀನೇ ಹೆಂಡತಿ'ಯೆಂದು ಹೇಳಿ, ಲಲಾಟದಲ್ಲಿ ವಿಭೂತಿಯ ಪಟ್ಟವ ಕಟ್ಟಿ ಹಸ್ತದಲ್ಲಿ ಕಂಕಣವ ಕಟ್ಟಿ, ಪಾದೋದಕ ಪ್ರಸಾದವನಿತ್ತು ಎಂದೆಂದಿಗೂ ಸತಿಪತಿಭಾವ ತಪ್ಪದಿರಲಿಯೆಂದು ನಿರೂಪಿಸಿದನಯ್ಯ ಶ್ರೀಗುರು. ಆ ನಿರೂಪವ ಮಹಾಪ್ರಸಾದವೆಂದು ಕೈಕೊಂಡೆನಯ್ಯ. ಇದು ಕಾರಣ, ಎನ್ನ ಪತಿಯಲ್ಲದೆ ಅನ್ಯವನರಿಯೆನಯ್ಯ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.