Index   ವಚನ - 184    Search  
 
ಲಿಂಗವ ಹಿಡಿದ ಹಸ್ತವೆ ಲಿಂಗಕ್ಕೆ ಪೀಠ ಕಾಣಿರೊ. ಲಿಂಗವ ಪೂಜಿಸುವ ಹಸ್ತವೆ ಶಿವಹಸ್ತ ಕಾಣಿರೊ. ಲಿಂಗವ ಧರಿಸಿಪ್ಪ ಅಂಗವೆ ಲಿಂಗದಂಗ ತಾನೆ ನೋಡಾ. ಲಿಂಗಪ್ರಸಾದವ ಕೊಂಬ ಪ್ರಾಣಲಿಂಗ ತಾನೆ ನೋಡಾ. ಒಳಹೊರಗೆ ಲಿಂಗಭರಿತವಾಗಿಪ್ಪ ಲಿಂಗದೇಹಿ ಲಿಂಗಪ್ರಾಣಿಗೆ ಕರ್ಮವ ಕಲ್ಪಿಸಿ ನುಡಿವ ಅಬದ್ಧರನೇನೆಂಬೆನಯ್ಯ. ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.