Index   ವಚನ - 204    Search  
 
ಶಿವನಲ್ಲದೆ ಬೇರೆ ದೈವವಿಲ್ಲ ನೋಡಾ ಎನಗೆ. ಶಿವಮಂತ್ರವಲ್ಲದೆ ಬೇರೆ ಮಂತ್ರವಿಲ್ಲ ನೋಡಾ ಎನಗೆ. ಇದು ಕಾರಣ, `ಓಂ ನಮಃಶಿವಾಯ ಓಂ ನಮಃ ಶಿವಾಯ ಓಂ ನಮಃಶಿವಾಯ' ಎಂಬ ಷಡಕ್ಷರಮಂತ್ರವನೆ ಜಪಿಸುತಿರ್ದೆನು ಕಾಣಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.