Index   ವಚನ - 206    Search  
 
ಓಂಕಾರವೆ ನಾದಮಯ. ಓಂಕಾರವೆ ಮಂತ್ರಮಯ. ಓಂಕಾರವೆ ಪರಿಪೂರ್ಣವಾಗಿ ಸರ್ವವ್ಯಾಪಕತ್ವವನ್ನುಳ್ಳುದು ನೋಡಾ. ಪ್ರಣವವೆ ಪರಮಾತ್ಮ ಸ್ವರೂಪವಾಗಿ ಪರಮೇಶ್ವರನ ಗೌಪ್ಯಮುಖ ನೋಡಾ. ಪ್ರಣವವೆ ಶಿವಶರಣರ ಹೃದಯಾಧಿಪತಿ. ಇದು ಕಾರಣ, ಹೃದಯಕಮಲ ಮಧ್ಯದಲ್ಲಿ ಪ್ರಣವವನುಚ್ಚರಿಸುತ್ತ ಪರಶಿವಧ್ಯಾನದಲ್ಲಿ ತರಹರವಾಗಿ ಪ್ರಣವಸ್ವರೂಪನಾಗಿದ್ದೆನಯ್ಯ. ಪಂಚಾಕ್ಷರವೆ ಪಂಚಬ್ರಹ್ಮಮಯವಾಗಿ ಆ ಪಂಚಾಕ್ಷರಿಮಂತ್ರವೆ ಶರೀರವಾಗಿರ್ದೆನು ಕಾಣಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.