Index   ವಚನ - 214    Search  
 
ಅಂಗಕ್ಕೆ ಆಚಾರವೆ ಆಶ್ರಯ. ಆಚಾರಕ್ಕೆ ಪ್ರಾಣವೆ ಆಶ್ರಯ. ಪ್ರಾಣಕ್ಕೆ ಜ್ಞಾನವೆ ಆಶ್ರಯ. ಜ್ಞಾನಕ್ಕೆ ಲಿಂಗವೆ ಆಶ್ರಯ. ಲಿಂಗಕ್ಕೆ ಜಂಗಮವೆ ಆಶ್ರಯ. ಇಂತೀ ಪಂಚಲಕ್ಷಣ ಪರಿಪೂರ್ಣವಾಗಿರಬಲ್ಲಡೆ ಸದ್ಭಕ್ತನೆಂಬೆನಯ್ಯ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.