Index   ವಚನ - 222    Search  
 
ಗುರುಮುಖದಿಂದ ಪರಮಲಿಂಗವು ತನ್ನ ಕರವ ಸೇರಿದ ಬಳಿಕ ಆ ಲಿಂಗದಲ್ಲಿ ಸ್ನೇಹ ಮೋಹವ ಬಲಿದು, ಲಿಂಗಪ್ರೇಮಿಯಾಗಿ, ಲಿಂಗಭಾವದಲ್ಲಿ ತನ್ನ ಭಾವವ ಬಲಿದ ಬಳಿಕ ಅನ್ಯವಿಷಯವ್ಯಾಪ್ತಿಯ ವ್ಯವಹಾರದ ಭ್ರಾಂತಿಯಿಲ್ಲದಿರಬೇಕು ನೋಡಾ. ಇದೇ ಏಕಚಿತ್ತಮನೋಭಾವಿಯ ಗುಣ; ಇದೇ ಲಿಂಗಗ್ರಾಹಕನ ನಿರುತ. ಲಿಂಗವ ಮುಟ್ಟಿ ಮತ್ತೇನನೂ ಮುಟ್ಟದ ನಿಃಕಳಂಕನ ನೋಡಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.