Index   ವಚನ - 239    Search  
 
ಅಂಗ ಲಿಂಗ, ಲಿಂಗ ಅಂಗವೆಂದೆಂಬಿರಿ; ಅಂಗ ಸೂತಕವ ಹೇಳುವಿರಿ. ಪ್ರಾಣವೆ ಪ್ರಸಾದ, ಪ್ರಸಾದವೆ ಪ್ರಾಣವೆಂದೆಂಬಿರಿ; ಪ್ರಕೃತಿ ಭಾವವ ಕಲ್ಪಿಸಿಕೊಂಬಿರಿ; ಇದು ಲಿಂಗಾಂಗ ಪ್ರಾಣಲಿಂಗ ಪ್ರಸಾದಭಾವವೆ? ಅಲ್ಲ ಕಾಣಿರೋ. ಲಿಂಗಾಂಗ ಪ್ರಾಣಲಿಂಗ ಪ್ರಸಾದಭಾವ ಭರಿತವಾದರೆ, ಲಿಂಗವ ಮುಟ್ಟಿ ಅರ್ಪಿಸಲ್ಲಮ್ಮೆವೆಂಬುದು ಅಜ್ಞಾನ ನೋಡಾ! ಈ ಅಜ್ಞಾನಿಗಳ ಅಂಗದಲ್ಲಿ ಲಿಂಗವುಂಟೆ? ಮನದಲ್ಲಿ ಮಂತ್ರವುಂಟೆ? ಪ್ರಾಣದಲ್ಲಿ ಪ್ರಸಾದವುಂಟೆ? ಈ ಅಶುದ್ಧ ಜೀವಿಗಳಿಗೆ ಶುದ್ಧವಹ ಶಿವಪ್ರಸಾದ ಸಂಬಂಧ ಎಂದೂ ಇಲ್ಲ ಕಾಣಾ! ಲಿಂಗ ಸೋಂಕಿದ ಅಂಗದಲ್ಲಿ ಶುದ್ಧಾಶುದ್ಧ ಉಂಟೇ? ಇಲ್ಲ; ಈ ಅನಂಗಸಂಗಿಗಳ ಮುಖ ತೋರದಿರಾಯೆನಗೆ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.