ವಚನ - 1387     
 
ಬ್ರಹ್ಮವ ನುಡಿದಾನು ಭ್ರಮಿತನಾದೆನಯ್ಯಾ, ಅದ್ವೈತವ ನುಡಿದಾನು ಅಹಂಕಾರಿಯಾದೆನಯ್ಯಾ, ಶೂನ್ಯವ ನುಡಿದಾನು ಸುಖದುಃಖಕ್ಕೆ ಗುರಿಯಾದೆನಯ್ಯಾ, ಸ್ಥಲಗೆಟ್ಟು ನುಡಿದಾನು ಸಂಸಾರಿಯಾದೆನಯ್ಯಾ, ಗುಹೇಶ್ವರಾ, ನಿಮ್ಮ ಶರಣ ಸಂಗನಬಸವಣ್ಣನ ಪ್ರಸಾದವ ಕೊಂಡು ಬದುಕಿದೆನಯ್ಯಾ.