Index   ವಚನ - 277    Search  
 
ಕೈ[ಯ]ಮರೆದು ಕಾದುವ ಕಾಳಗವದೇನೋ? ಮೈಮರೆದು ಮಾಡುವ ಮಾಟವದೇನೋ? ಬಾ[ಯ] ಮರೆದು ಉಂಬ ಊಟವದೇನೋ? ಸನ್ಮಾನ ಸಾವಧಾನ ಸನ್ನಹಿತವಿಲ್ಲದ ಲಿಂಗ ಸಂಧಾನ ಜನ್ಮದ ಮೃತ್ಯು ನೋಡಾ. ಎಚ್ಚರಿಕೆಯಿಲ್ಲದ ಅರ್ಪಿತ ವಿಕಾರ ನೋಡಾ. ಸಂಕಲ್ಪ ವಿಕಲ್ಪವಿಲ್ಲದೆ ಮನ ಲಿಂಗಸಾಹಿತ್ಯವಾದರೆ ಅರ್ಪಿತ; ಅದು ಪ್ರಸಾದ ನೋಡಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.