Index   ವಚನ - 306    Search  
 
ಗುರು ಲಿಂಗ ಜಂಗಮದ ಭಕ್ತರೆಂದು ಗುಣಕಥನವ ನುಡಿದುಕೊಂಡು ಎಮಗೆ ಅನ್ಯದೈವವಿಲ್ಲವೆಂಬ ಸೋರೆಯ ಬಣ್ಣದ ಅಣ್ಣಗಳು ನೀವು ಕೇಳಿಭೋ. ನೀವರಿಯದಿದ್ದರೆ ನಾ ಹೇಳಿಹೆ ಕೇಳಿಭೋ. ಹೆಣ್ಣೊಂದು ಭೂತ; ಮಣ್ಣೊಂದು ಭೂತ; ಹೊನ್ನೊಂದು ಭೂತ. ಹೆಣ್ಣು ನಿಮ್ಮದೆಂಬಿರಿ; ಮಣ್ಣು ನಿಮ್ಮದೆಂಬಿರಿ; ಹೊನ್ನು ನಿಮ್ಮದೆಂಬಿರಿ. ಅವೇ ಪ್ರಾಣವಾಗಿ ಸಾವುತ್ತ ಹುಟ್ಟುತ್ತಿಪ್ಪಿರಿ. ಆ ಭೂತ ನಿಮ್ಮ ಹಿಡಿದು, ಹಿಸಿಕಿ ಕೊಂದು ಕೂಗಿ, ತಿಂದು ತೇಗಿ, ಹೀರಿ ಹಿಪ್ಪೆಯ ಮಾಡಿ ಗಾರುಮಾಡುತಿಪ್ಪವು ಕಾಣಿಭೋ. ಅ[ವ] ನೀವು ಹಿಡಿದು ಕೀರ್ತಿಸುತಿರ್ದು ಎಮಗೆ ಅನ್ಯದೈವವಿಲ್ಲೆಂಬ ಕುನ್ನಿಮನುಜರ ಮೆಚ್ಚುವನೆ? ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.