ವಚನ - 1393     
 
ಭಕ್ತನಿದ್ದ ಠಾವಿಗೆ ಕರ್ತ ಬಂದಡೆ. ಅತ್ತಿತ್ತ ಹರಿಯದೆ ನಂಬಬೇಕು ನೋಡಾ. ಕರ್ತನ ಕಂಡು ಭೃತ್ಯ ಉರಿಯನುಗುಳಿದಡೆ ಬಳಿಕ ಈ ಕರ್ತನ [ಭೃತ್ಯ] ಭಾವಕ್ಕೆ ಸಂಬಂಧವೇನು? ತಪ್ಪಿ ತಪ್ಪಿ ತಿದ್ದಿಕೊಂಡೆಹೆನೆಂದಡೆ ಹಸನಾಗಬಲ್ಲುದೆ? ಗುಹೇಶ್ವರನ ಶರಣನಾರೆಂಬುದನು ನೀನೆತ್ತ ಬಲ್ಲೆ? ಹೋಗಾ, ಮರುಳ ಸಿದ್ಧರಾಮಯ್ಯಾ.