ವಚನ - 1398     
 
ಭಕ್ತ ಭಕ್ತನೆಂದೇನೊ? ಭವಿಗಳು ಮನೆಯಲುಳ್ಳನ್ನಕ್ಕ ಭಕ್ತನೆ? ಭಕ್ತ ಭಕ್ತನೆಂದೇನೊ? ಅನ್ಯದೈವ ಸುರೆ ಮಾಂಸವುಳ್ಳನ್ನಕ್ಕ ಭಕ್ತನೆ? ಭಕ್ತ ಭಕ್ತನೆಂದೇನೊ? ಹರಕೆ ತೀರ್ಥಯಾತ್ರೆಯುಳ್ಳನ್ನಕ್ಕ ಭಕ್ತನೆ? ಭಕ್ತ ಭಕ್ತನೆಂದೇನೊ? ತನು ಮನ ಧನ ವಂಚನೆಯುಳ್ಳನ್ನಕ್ಕ ಭಕ್ತನೆ? ಇವರೆಲ್ಲರು ಎದೆಯಲ್ಲಿ ಕಲ್ಲನಿರಿದುಕೊಂಡು ಸಾವಿಂಗೆ ಸಂಬಳಿಗರು ಕಾಣಾ ಗುಹೇಶ್ವರಾ.