Index   ವಚನ - 429    Search  
 
ಆಚಾರಲಿಂಗಕ್ಕೆ ಗುರುಲಿಂಗವೇ ಪ್ರಾಣ. ಗುರುಲಿಂಗಕ್ಕೆ ಶಿವಲಿಂಗವೇ ಪ್ರಾಣ. ಶಿವಲಿಂಗಕ್ಕೆ ಜಂಗಮಲಿಂಗವೇ ಪ್ರಾಣ. ಜಂಗಮಲಿಂಗಕ್ಕೆ ಪ್ರಸಾದಲಿಂಗವೇ ಪ್ರಾಣ. ಪ್ರಸಾದಲಿಂಗಕ್ಕೆ ಮಹಾಲಿಂಗವೇ ಪ್ರಾಣ. ಇಂತಿವು ಒಂದಕ್ಕೊಂದು ಪ್ರಾಣವಾಗಿಪ್ಪುದಯ್ಯ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.