Index   ವಚನ - 444    Search  
 
ಆಕಾಶವೇ ಅಂಗವಾದ ಶರಣನಲ್ಲಿಯೆ ಐಕ್ಯ ಭಕ್ತ ಮಾಹೇಶ್ವರ ಪ್ರಸಾದಿ ಪ್ರಾಣಲಿಂಗಿಯಪ್ಪ ಅಂಗಪಂಚಕವು ಗರ್ಭೀಕೃತವಾಗಿ ಆ ಶರಣಂಗೆ ಪ್ರಸಾದಲಿಂಗವೆ ಸ್ವಾಯತವಾಗಿ ಆ ಪ್ರಸಾದಿಲಿಂಗದಲ್ಲಿಯೆ ಮಹಾಲಿಂಗ ಆಚಾರಲಿಂಗ ಗುರುಲಿಂಗ ಶಿವಲಿಂಗ ಜಂಗಮಲಿಂಗವೆನಿಸುವ ಲಿಂಗಪಂಚಕವು ಗರ್ಭೀಕೃತವಾಗಿ ಪ್ರಸಾದಲಿಂಗವೆ ಆಶ್ರಯವಾಗಿ ಇಂತೀ ಷಡ್ವಿಧಲಿಂಗದಲ್ಲಿ ಬೆರಸಿ ಬೇರಿಲ್ಲದಿರಬಲ್ಲರೆ ಶರಣನೆಂಬೆನಯ್ಯ ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.