ವಚನ - 1412     
 
ಭೂಮಿ ನಿನ್ನದಲ್ಲ ಹೇಮ ನಿನ್ನದಲ್ಲ ಕಾಮಿನಿ ನಿನ್ನವಳಲ್ಲ- ಅವು ಜಗಕ್ಕಿಕ್ಕಿದ ವಿಧಿ. ನಿನ್ನ ಒಡವೆ ಎಂಬುದು ಜ್ಞಾನರತ್ನ. ಅಂತಪ್ಪ ದಿವ್ಯರತ್ನವ ಕೆಡಗುಡದೆ ಆ ರತ್ನವ ನೀನು ಅಲಂಕರಿಸಿದೆಯಾದಡೆ ನಮ್ಮ ಗುಹೇಶ್ವರಲಿಂಗದಲ್ಲಿ ನಿನ್ನಿಂದ ಬಿಟ್ಟು ಸಿರಿವಂತರಿಲ್ಲ ಕಾಣಾ, ಎಲೆ ಮನವೆ.