Index   ವಚನ - 524    Search  
 
ಗೇಣುದ್ದ ಒಡಲೊಳಗೆ ಬೆಟ್ಟದುದ್ದ ಮಾತು ಹುಟ್ಟಿತ್ತು ನೋಡಾ. ಬೆಟ್ಟದುದ್ದ ಮಾತೆಲ್ಲ ಏತಕಯ್ಯಯೆಂದರೆ ಗೇಣುದ್ದ ಒಡಲ ಹೂಣುವದಕ್ಕಾಗಿ ಕಾಣಾ. ವಾಚಾಳತ್ವದಿಂದ ಉದರವ ಹೊರೆವವರೆಲ್ಲಾ ಗುರುವೆ? ಇಂದ್ರಿಯಂಗಳಿಗೊಂದೊಂದು ಮಾತ ಕಲಿತು ಸದಾಶಿವನ ಸಂಧಿಸಿ ಸರ್ವರಿಗೆ ತೋರಿಹೆನೆಂಬರು,ತಾವೇಕೆ ಕಾಣರೋ? ತಾವು ಕಾಣದೆ, ತಮ್ಮಲ್ಲಿ ವಸ್ತು ವಿವೇಕವಿಲ್ಲದೆ ಅನ್ಯರಿಗೆ ಹೇಳುವ ಬೋಧೆ, ಅದು ಅವಿಚಾರ ಕಾಣಾ. ಗುರುತತ್ವದ ಬಲ್ಲ ಗುರು ಶುದ್ಧ ಚಿದ್ರೂಪನು. ಚಿನ್ಮಯನು ನೋಡಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.