ವಚನ - 1413     
 
ಭೂಮಿಯಲ್ಲಿ ಹುಟ್ಟಿ ಅಂತರಂಗದಲ್ಲಿ ಬೆಳೆವ ಫಲವೃಕ್ಷದಂತೆ, ಸರ್ವರಿಗೆ ಭೂತಹಿತವಾಗಿ ಫಲರಸವನೀವಂತೆ, ನೀ ಭೂಮಿಯಾಗಿ ನಾ ಸಸಿಯಾಗಿ ಬೆಳೆದ ಬೆಂಬಳಿಯಲ್ಲಿ ಗುಹೇಶ್ವರಲಿಂಗವೆಂಬುದು ಫಲವಾಯಿತ್ತು. ಅರಿದ ಅರಿಕೆ ರಸವಾಯಿತ್ತು. ಸಂಗನಬಸವಣ್ಣನಿಂದ ಎನ್ನಂಗ ಬಯಲಾಯಿತ್ತು!