Index   ವಚನ - 538    Search  
 
ಪಶ್ಚಿಮ ಚಕ್ರದಲ್ಲಿ ನಿತ್ಯ ನಿರಂಜನನ ಬೆಳಗು ತತ್ವಬ್ರಹ್ಮಾಂಡದಿಂದತ್ತತ್ತಲಾದ ಘನ ನೋಡಾ. ಅದು ಪರಂಜ್ಯೋತಿ ಪರತತ್ವ ಪರಾಪರವಸ್ತುವೇ ಪ್ರಸಾದ ನೋಡಾ. ಪ್ರತಿಯಿಲ್ಲದ ಅಪ್ರತಿಮ ಪ್ರಸಾದದಲ್ಲಿ ನಿಃಪತಿಯಾಗಿ ಮಹಾಪ್ರಸಾದಿಯಾದೆನು ನೋಡಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.