ವಚನ - 1420     
 
ಮಥನದ ಲೀಲೆಯಲ್ಲಿ ಹುಟ್ಟುವುದೇ ಬ್ರಹ್ಮವು? ಶ್ರುತಿ ಸ್ಮೃತಿಗಳಿಗೆ ಅಳವಡದು ನೋಡಾ! ಪೃಥ್ವಿಯೊಳಗಿಲ್ಲದ ಅಚಲವಪ್ಪ ಘನವನು, ಸಚರಾಚರದಲ್ಲಿ ಭರಿತವೆಂತೆಂಬೆ? ಇಲ್ಲದ ಲಿಂಗವನಲ್ಲಲ್ಲಿಗೆ ಉಂಟುಮಾಡುವ ಈ ಲೀಲೆಯ ವಾರ್ತೆ ಎಲ್ಲಿಯದೊ ಗುಹೇಶ್ವರಾ?