ವಚನ - 1421     
 
ಮನ ಉಂಟೆ ಮರುಳೆ ಶಿವಯೋಗಿಗೆ? ಮತ್ತೊಂದು ಮನಮಗ್ನ ಉಂಟೆ ಶಿವಯೋಗಿಗೆ? ಇಲ್ಲದ ಮನವ ಉಂಟೆಂದು ನುಡಿದು, ಅಡಗಿಸಿದೆನೆಂಬ ಮಾತು ಮನವ ನೆಲೆಮಾಡಿ ತೋರುತ್ತದೆ. ಗುಹೇಶ್ವರನ ಅರಿದ ಶರಣಂಗೆ ತೋರಲಿಲ್ಲ ಅಡಗಲಿಲ್ಲ ಕೇಳಾ.