Index   ವಚನ - 620    Search  
 
ಘೃತ ಘೃತವ ಬೆರಸಿದಂತೆ, ಕ್ಷೀರ ಕ್ಷೀರವ ಬೆರಸಿದಂತೆ, ತೈಲ ತೈಲವ ಬೆರಸಿದಂತೆ, ನೀರು ನೀರ ಬೆರಸಿದಂತೆ, ಜ್ಯೋತಿ ಜ್ಯೋತಿಯ ಕೂಡಿದಂತೆ, ಬಯಲು ಬಯಲ ಬೆರಸಿದಂತೆ, ಪ್ರಾಣ ಪ್ರಾಣ ಸಂಯೋಗವಾದ ಶರಣ ಲಿಂಗ ಸಮರಸವನೇನೆಂಬೆನಯ್ಯಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.