Index   ವಚನ - 671    Search  
 
ಕಂಡೊಂದ ನುಡಿವುದೀ ಲೋಕ. ಕಾಣದೊಂದ ನುಡಿವುದೀ ಲೋಕ. ಹಿಂದೆ ನಿಂದಿಸಿದರೆಂದು ಕುಂದಲಿಲ್ಲ. ಮುಂದೆ ವಂದಿಸಿದರೆಂದುಬ್ಬಲಿಲ್ಲ. ವಂದನೆ ನಿಂದನೆಯೆಂಬುದು ಉಪಜೀವಿಗಳಿಗಲ್ಲದೆ, ಉಪಮಾತೀತನಾದ ಪ್ರಾಣಲಿಂಗೈಕ್ಯನಿಗುಂಟೇ? ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.