Index   ವಚನ - 684    Search  
 
ಗಾಳಿ ಗಂಧವನಪ್ಪಿದಂತೆ, ಬಯಲು ಬಯಲನಪ್ಪಿದಂತೆ, ಬೆಳಗು ಬೆಳಗನಪ್ಪಿ ಮಹಾ ಬೆಳಗಾದಂತೆ, ಶರಣ ಲಿಂಗವನಪ್ಪಿ, ಮಹಾಲಿಂಗವೇ ತಾನು ತಾನಾಗಿ, ನಿರ್ವಯಲಾದನು ನೋಡಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.