Index   ವಚನ - 694    Search  
 
ಶಾಂಭವಲೋಕದ ಕುಂಭಿನಿಯುದರದ ಮೇಲೆ ಅಂಗನೆ ಅರುದಿಂಗಳ ಹಡೆದಳು ನೋಡಾ. ಅರುದಿಂಗಳ ಅದಾರನೂ ಅರಿಯದೆ ನಿರ್ವಯಲನೆ ಅರಿವುತ್ತರಿವುತ್ತ ಬೆರಗಾಗಲು ಕುಂಭಿನಿಯುದರದಂಗನೆ ಸತ್ತುದ ಕಂಡು ಇಹಲೋಕ ಪರಲೋಕ ಆವ ಲೋಕವ ಹೊಗದೆ ಲೋಕಶ್ರೇಷ್ಠವಲ್ಲವೆಂದು ದೇಹವಿಲ್ಲದ ದೇವನ ಉದರವ ಬಗೆದು ಹೊಕ್ಕು ಅಗಣಿತನಪ್ರಮಾಣನಾದ ಲಿಂಗೈಕ್ಯಂಗೆ ನಮೋ ನಮೋಯೆಂದು ಬದುಕಿದೆನು ಕಾಣಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.