Index   ವಚನ - 14    Search  
 
ಪಕ್ವ ಫಲದಲ್ಲಿಹ ಸ್ವಾದುವಿನಂತೆ, ತುಪ್ಪದಲ್ಲಿಹ ಕಂಪಿನಂತೆ, ಚಿನ್ನದಲ್ಲಿಹ ಬಣ್ಣದಂತೆ, ಅಲ್ಲಿಯೆ ಹುಟ್ಟಿ ಅಲ್ಲಿಯೆ ತೋರುವಂತೆ, ಎನ್ನಂತರಂಗದಲ್ಲಿರ್ದು ತೋರುತ್ತಿಹ ನಿಮ್ಮ ನಿಜವನು, ನಿಮ್ಮಿಂದರಿದೆನು ಕಾಣಾ, ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರ.