Index   ವಚನ - 17    Search  
 
ಅಂದು ಆದಿಯ ಬಿಂದುವಿಲ್ಲದಂದು, ನಿಮಗೂ ನನಗೂ ಲಿಂಗಾಂಗವೆಂಬ ಹೆಸರಿಲ್ಲದೆ ಇರ್ದೆವೆಂದು, ಆದಿಬಿಂದು ರೂಹಿಸಿದಲ್ಲಿ ಲಿಂಗಾಂಗವೆಂಬ ಹೆಸರು ಬಂದಿತ್ತೆಂದು, ಅಂದು ಆದಿಯಾಗಿ ನೀವಾವಾವ ಲೀಲೆಯ ಧರಿಸಿದಡೆ, ಆ ಲೀಲೆಗೆ ನಾನಾಧಾರವಾದೆ. ನಿಮಗೂ ನನಗೂ ಎಂದೆಂದೂ ಹೆರೆಹಿಂಗದ ಯೋಗ. ಅದು ನೀವು ಬಲ್ಲಿರಿ, ನಾ ಬಲ್ಲೆನು, ನುಡಿದು ತೋರಲೇಕಿನ್ನು? ಇಂದೆನಗೆ ತನು ಯೋಗವಾದಲ್ಲಿ ನಿಜ ಹೊರತೆ? ``ಶಿವಯೋಗಿ ಶರೀರೇ ಚ ಸದಾ ಸನ್ನಿಹಿತಶ್ಯಿವಃ" ಎಂದುದಾಗಿ, ನಿಮಗೆ ಬೇರೆ ದೇಹವಿಲ್ಲ. ನನ್ನ ದೇಹವೆ ನಿಮ್ಮ ದೇಹವೆಂಬುದಕ್ಕೆ ನೀವೇ ಸಾಕ್ಷಿ, ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರಾ.