Index   ವಚನ - 35    Search  
 
ಕನ್ನವ ಸವೆವ ಕನ್ನಗತ್ತಿಗೆ ಕನ್ನ ಸವೆಯಿತ್ತೆ ಕೈ ತಟ್ಟಿತೆಂಬಂತೆ, ಹೊನ್ನೆನ್ನದು ಹೆಣ್ಣೆನ್ನದು ಮಣ್ಣೆನ್ನದು ಎಂದು, ಬಳಲುವಣ್ಣಗಳ ಬಾಯ ಟೊಣದು, ಇವು ಮೂರು ತನ್ನಿಂದ ಬಲ್ಲಿದರಲ್ಲಿಗೆ ಹೋಗದೆ ಮಾಣವು. ಇವರಲ್ಲಿ ಬನ್ನಬಟ್ಟು ಬಳಲುವ ಕರ್ಮಿಗಳಿಗಿನ್ನೆಲ್ಲಿಯ ಮುಕ್ತಿಯಯ್ಯ, ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರ.