Index   ವಚನ - 52    Search  
 
ಪೂರ್ವಜನ್ಮದಲ್ಲಿ ಮಾಡಿದ ಕರ್ಮ, ಈಗಿನ ಜನ್ಮದಲ್ಲಿ ಭೋಗಿಸಲಿಕ್ಕೀಡಾಯಿತ್ತು. ಈಗ ಮಾಡಿದ ಕರ್ಮ, ಮುಂದಕ್ಕೆ ಬಿತ್ತಿದ ಬೆಳೆಯನುಂಬಂತೆ ಬರ್ಪುದು ತಪ್ಪದು. ಈ ಕರ್ಮವುಳ್ಳನ್ನಕ್ಕ ಆರಿಗಾದರೂ ಬಳಲಿಕೆ ಬಿಡದು. ಈ ಕರ್ಮ ಹರಿದಂದಿಗೆ ನಿಮ್ಮ ಕಾಂಬರು ಕಾಣಾ, ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರ.