Index   ವಚನ - 116    Search  
 
ಹಾವಾಡಿಗ ಹಾವನಾಡಿಸುವಲ್ಲಿ, ತನ್ನ ಕಾಯ್ದುಕೊಂಡು, ಹಾವನಾಡಿಸುವಂತೆ, ಆವ ಮಾತನಾಡಿದಡೂ, ತನ್ನ ಕಾಯ್ದು ಆಡಬೇಕು. ಅದೆಂತೆಂದಡೆ, ತನ್ನ ವಚನವೆ ತನಗೆ ಹಗೆಯಹುದಾಗಿ. ಅನ್ನಿಗರಿಂದ ಬಂದಿತ್ತೆನ್ನಬೇಡ. ಅಳಿವುದು ಉಳಿವುದು ತನ್ನ ವಚನದಲ್ಲಿಯೆ ಅದೆ. ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರ, ಹಗೆಯು ಕೆಳೆಯು ತನ್ನ ವಚನವೇ, ಬೇರಿಲ್ಲ.