Index   ವಚನ - 128    Search  
 
ಊರ್ಧ್ವಮುಖವಾದ, ಅನಂತೇಶನೆಂಬ ವಾಸುಕಿಯ ಶಿರದ ಮೇಲಿಹ ಅಷ್ಟದಳಾಬ್ಜ ಮಧ್ಯದಲ್ಲಿ, ಒಪ್ಪುತ್ತಿಹ ಶುದ್ಧವಿದ್ಯೆಯೇ ಪೀಠವಾದ ಶಿವಲಿಂಗವೊಂದರಲ್ಲಿ, ದೃಢಭಕ್ತಿಯುಳ್ಳಾತನ ದೇಹವೇ ಲಿಂಗದೇಹವು. ಆ ಚಿದ್ರೂಪನಾದ ಪರಮ ಸ್ವರೂಪನ ಮೂರ್ತಿ ತಾನೇ ಇಷ್ಟಲಿಂಗವು. ಆ ಇಷ್ಟಲಿಂಗದಲ್ಲಿ ದೇಹವನಡಗಿಸಿದ ಮಹಾತ್ಮನ ಮನ ಬುದ್ಧಿ ಅಹಂಕಾರ ಇಂದ್ರಿಯಾದಿ ಗುಣಂಗಳು ಜನನಾದಿ ವಿಕಾರಂಗಳ ಹೊದ್ದವಾಗಿ, ಆತ ನಿರ್ದೇಹಿ, ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರನ ಶರಣನುಪಮಾತೀತನು.