ವಚನ - 1444     
 
ಮಾಯಾಮಂಜಿನ ಜಲ ಉಕ್ಕಿ ಸಂಸಾರಕ್ಕೆ ಬೀಜವಾಗಿ ಘಟಾನುಘಟಿತರ ಲಯಜನನವ ತನ್ನೊಳಗೆ ಮಾಡಿಸಿ, ಕುಂಜರ ಬಂದು ಸಿಂಹಾಸನವ ಸೀಳಿದಂತೆ ನಿನ್ನಂಗದಲ್ಲಿ ನಿನ್ನನೆ ಕೊಲುವುದಾಗಿ ರಂಜನೆಗೆ ಸಿಲುಕುಗೊಳಿಸಿ ಮಂಜಿನ ರಂಜಕನ ಮಾಡದ ಮುನ್ನ ನಿರಂಜನನಾಗು ಕಂಡಾ ನೀನು! ನೀನಂಜದೆ ನೆನೆ ಕಂಡಾ ಗುಹೇಶ್ವರನ.