Index   ವಚನ - 150    Search  
 
ಶಮೆ ದಮೆ ವಿವೇಕ ವೈರಾಗ್ಯ ಪರಿಪೂರ್ಣಭಾವ ಶಾಂತಿ ಕಾರುಣ್ಯ ಶ್ರದ್ಧೆ ಸತ್ಯ ಸದ್ಭಕ್ತಿ ಶಿವಜ್ಞಾನ ಶಿವಾನಂದ ಉದಯವಾದ ಮಹಾಭಕ್ತನ ಹೃದಯದಲ್ಲಿ ಶಿವನಿಪ್ಪ. ಆತನ ದರ್ಶನ ಸ್ಪರ್ಶನ ಸಂಭಾಷಣೆಯಿಂದ ಕೇವಲ ಮುಕ್ತಿಯಪ್ಪುದು ತಪ್ಪದಯ್ಯಾ, ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರ.