Index   ವಚನ - 153    Search  
 
ಭಕ್ತಸ್ಥಲ ಬಸವಣ್ಣಂಗಾಯಿತ್ತು. ಮಾಹೇಶ್ವರಸ್ಥಲ ಮಡಿವಾಳಂಗಾಯಿತ್ತು. ಪ್ರಸಾದಿಸ್ಥಲ ಚೆನ್ನಬಸವಣ್ಣಂಗಾಯಿತ್ತು. ಪ್ರಾಣಲಿಂಗಿಸ್ಥಲ ಸಿದ್ಧರಾಮಯ್ಯಂಗಾಯಿತ್ತು. ಶರಣಸ್ಥಲ ಪ್ರಭುದೇವರಿಗಾಯಿತ್ತು. ಐಕ್ಯಸ್ಥಲ ಅಜಗಣ್ಣಂಗಾಯಿತ್ತು. ಎನಗಿನ್ನಾವ ಸ್ಥಲವೂ ಇಲ್ಲವೆಂದು ನಾನಿರಲು, ಇಂತಿವರೆಲ್ಲಾ ಷಡುಸ್ಥಲ ಪ್ರಸಾದವನಿತ್ತರಾಗಿ, ನಾನು ಮುಕ್ತನಾದೆನು ಕಾಣಾ, ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರ.