Index   ವಚನ - 180    Search  
 
ಆವಾವ ಜಾತಿ ಯೋನಿಗಳಲ್ಲಿ ಹುಟ್ಟಿದ ಪ್ರಾಣಿಗಳು ಆ ಜಾತಿಯಂತಹವಲ್ಲದೆ ಮತ್ತೊಂದು ಜಾತಿಯಹರೆ ಹೇಳಾ. "ಯಥಾ ಬೀಜಸ್ತಥಾ ವೃಕ್ಷಃ" ಎಂಬ ನ್ಯಾಯದಂತೆ, ಲಿಂಗದಿಂದೊಗೆದ ಶರಣ ಲಿಂಗವಹನಲ್ಲದೆ, ಮಾನವನಾಗಲರಿಯನೆಂಬುದಕ್ಕೆ ಗುರುವಚನವೇ ಪ್ರಮಾಣು. ಇಂತಿದನರಿಯದೆ, ನಾನು ಮಾನವನು ದೇಹಿ ಸಂಸಾರಬದ್ಧನು ಎಂಬವಂಗೆ, ಎಂದೆಂದು ಮುಕ್ತಿಯಿಲ್ಲ, ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರನ ಶರಣ ಮಾನವನಲ್ಲ.