ಹುಲ್ಲಹೊರೆಯೊಳಗೊಂದು ಕಿಚ್ಚು ಹುಟ್ಟಿ ಸುಡುವುದ ಕಂಡೆ.
ಹುಲ್ಲ ಮೇವ ಎರಳೆಯ ಕೋಡು ಮುರಿದು
ಅಡವಿಯಲಿ ಬಿಟ್ಟುದ ಕಂಡೆ.
ಬಲ್ಲಿದ ಬಲೆಗಾರನ ಬಲೆಯ ನೇಣು ಹರಿದು,
ಬಲೆಯ ಬಿಟ್ಟುಹೋದುದ ಕಂಡೆ.
ಅಟ್ಟೆಯ ಬಿಟ್ಟು ತಲೆ ಆಕಾಶವನಡರಿತ್ತ ಕಂಡೆ.
ದೂರ ದಾರಿ ಸಾರೆಯಾದುದ ಕಂಡೆ.
ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರಾ ನಿಮ್ಮ ಶರಣ,
ಹುಟ್ಟು ಮುರಿದು ಬಟ್ಟಬಯಲಾದುದ ಕಂಡೆ.