ವಚನ - 1457     
 
ಮೇರುಗಿರಿಗಳೆಲ್ಲವೂ ಪ್ರಮಥರೊಡವೆ. ರಜತಗಿರಿಗಳೆಲ್ಲವೂ ಪುರಾತರೊಡವೆ. ಚತುರ್ದಶ ಭುವನವೆಲ್ಲವೂ ಲಿಂಗದೊಡವೆ. ಪೃಥ್ವಿ ಎಂಬುದು ಕರ್ತಾರನ ಕಮ್ಮಟ ಅಚ್ಚಿನ ಮೊಳೆ ಬಾಣಸದ ಮನೆ. ತನುಮನಧನಂಗಳೆಲ್ಲವು ನಮ್ಮ ಗುಹೇಶ್ವರಲಿಂಗದ ಸೊಮ್ಮು. ನೀನೇನ ಕೊಟ್ಟು ಭಕ್ತನಾದೆ ಹೇಳಾ ಬಸವಣ್ಣಾ?