ವಚನ - 1461     
 
ಯೋಗ ವಿಯೋಗವೆಂಬ ಹೊಲಬ ಬಲ್ಲವರನಾರನೂ ಕಾಣೆನು. ನವನಾಳದ ಸುಳುಹ ತಿಳಿದಹೆನೆಂಬುದು ಯೋಗವಲ್ಲ. ಐವತ್ತೆರಡಕ್ಷರದ ಶಾಸನವ ತಿಳಿದು ನೋಡಿ, ಹೃದಯಕಮಲಕರ್ಣಿಕೆಯಲ್ಲಿ ಸಿಲುಕಿದೆನೆಂಬುದು ಯೋಗವಲ್ಲ. ಬಹಿರಂಗವೆಂಬಡೆ ಕ್ರಿಯಾಬದ್ಧ ಅಂತರಂಗವೆಂಬಡೆ ವಾಙ್ಮನೋತೀತ. ಗುಹೇಶ್ವರನೆಂಬ ಲಿಂಗವು ಷಡುಚಕ್ರದ ಮೇಲಿಲ್ಲ ಕಾಣಾ ಸಿದ್ಧರಾಮಯ್ಯಾ.