Index   ವಚನ - 342    Search  
 
ಅಂಗದೊಳಗೆ ಲಿಂಗವಿದೆ, ಲಿಂಗದೊಳಗೆ ಅಂಗವಿದೆ. ಅಂಗ ಲಿಂಗ ಸಂಗದೊಳಗೆ ಪರಮ ಸುಖವಿದೆ. ಪರಮ ಸುಖದೊಳಗೆ ಪ್ರಸಾದವಿದೆ. ಪ್ರಸಾದದೊಳಗೆ ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರಾ, ನಿಮ್ಮ ಶರಣನ ನಿಲವಿದೆ.