Index   ವಚನ - 350    Search  
 
ಆಯುಧವೈನೂರಿದ್ದರೇನು, ರಣರಂಗದಲ್ಲಿ ಹಗೆಯ ಗೆಲುವುದು ಒಂದೇ ಅಲಗು. ಏನನೋದಿ ಏನ ಕೇಳಿದರೇನು, ತಾನಾರೆಂಬುದನರಿಯದನ್ನಕ್ಕ? ತಾನಾರೆಂಬುದನರಿದ ಬಳಿಕ ನೀನಾನೆಂಬುದಿಲ್ಲ. ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರನು ತಾನೆಯಾಗಿಹನು.