Index   ವಚನ - 361    Search  
 
ಸೇವ್ಯಗುರುವಿನ ಮಹಾಪ್ರಸಾದವನನುಭವಿಸಿ, ತಾನೇ ಗುರುತತ್ವವಾದ ಮಹಾಪ್ರಸಾದಿಗೆ, ಬೇರೆ ಜ್ಞಾನವುಂಟೇ? ಅಪರಿಚ್ಛಿನ್ನ ವಾಙ್ಮನಕ್ಕಗೋಚರ ಪರಾನಂದರೂಪ ನಿತ್ಯ ತೃಪ್ತ ನಿಜಮುಕ್ತನು, ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರಾ, ನಿಮ್ಮ ಶರಣನು.