Index   ವಚನ - 1471    Search  
 
ರೂಪಿಂಗೆ ಕೇಡುಂಟು ನಿರೂಪಿಂಗೆ ಕೇಡಿಲ್ಲ. ರೂಪು ನಿರೂಪನೊಡಗೂಡುವ ಪರಿ ಎಂತು ಹೇಳಾ? ಅಸಂಬಂಧ ಸಂಬಂಧವಾಗಿ ಇದೆ. ದೇಹ ಇಂದ್ರಿಯವೆಂಬ ಜಾತಿಸೂತಕವಿರಲು ಗುಹೇಶ್ವರಲಿಂಗವ ಮುಟ್ಟಬಾರದು ಕೇಳವ್ವಾ.