Index   ವಚನ - 1473    Search  
 
ರೂಪೆಂದಡೆ ನಷ್ಟ, ನಿರೂಪೆಂದಡೆ ಶೂನ್ಯ. ರೂಪು ನಿರೂಪನತಿಗಳೆದ ರೂಪ ಕಾಬಡೆ, ಗುಹೇಶ್ವರಲಿಂಗದಲ್ಲಿ ತನ್ನ ರೂಪನತಿಗಳದು ಕಾಣಬೇಕು ಕಾಣಾ ಸಿದ್ಧರಾಮಯ್ಯಾ.