Index   ವಚನ - 1475    Search  
 
ಲಿಂಗ ಜಂಗಮವ ಪೂಜಿಸಿ ಭಕ್ತನಾದೆನೆಂದಡೆ ಸದಾಚಾರವಿರಬೇಕು ನೋಡಾ. ಆ ಸದಾಚಾರಕ್ಕೆ ಭೃತ್ಯಾಚಾರವೆ ಮೊದಲು ನೋಡಾ. ವಿಶ್ವಾಸವುಳ್ಳ ಭಕ್ತಿಗೆ ಹೊರೆಯಿಲ್ಲ! ಅಲಂಕಾರವೆಂಬ ಅಲಗ ಹಿಡಿದು ಮಾಡುವ ಭಕ್ತಿ ತನ್ನನೆ ಇರಿವುದು ಗುಹೇಶ್ವರನೆಂಬ ಹಗೆಯ ಗೆಲುವಡೆ ಅರಿವೆಂಬ ಅಲಗ ಅವಧಾನ ತಪ್ಪದೆ ಹಿಡಿಯಬೇಕು ನೋಡಾ ಸಂಗನಬಸವಣ್ಣಾ.