ವಚನ - 148     
 
ಸತಿ ಭಕ್ತೆಯಾದಡೆ ಹೊಲೆಗಂಜಲಾಗದು, ಪತಿ ಭಕ್ತನಾದೆಡೆ ಕುಲಕಂಜಲಾಗದು. ಸತಿ-ಪತಿಯೆಂಬ ಅಂಗಸುಖ ಹಿಂಗಿ, ಲಿಂಗವೇ ಪತಿಯಾದ ಬಳಿಕ ಸತಿಗೆ ಪತಿಯುಂಟೆ? ಪತಿಗೆ ಸತಿಯುಂಟೆ? ಹಾಲುಂಡು ಮೇಲುಂಬರೆ ಗುಹೇಶ್ವರಾ?