ವಚನ - 1481     
 
ಲಿಂಗವಂತನ ನಡೆ ನುಡಿ ಚಾರಿತ್ರ ನಿಂದಕವನಾಡಿದಡೆ ಆ ಲಿಂಗ ನಿಮ್ಮ ಹಲ್ಲ ಕಳೆವ, ಆ ಲಿಂಗ ನಿಮ್ಮ ನರಕಕ್ಕಿಕ್ಕುವ. ಆ ಲಿಂಗವಂತ ಲಿಂಗ ಪ್ರಾಣಿಯಾಗಿಪ್ಪ. ಇದು ಸತ್ಯ ವಚನ. ಇದ ಕೇಳಿ ಲಿಂಗವಂತನ ನಾಸ್ತಿಕವನಾಡಿದಡೆ ರೌರವನರಕದಲ್ಲಿಕ್ಕುವ ಕಾಣಾ ಗುಹೇಶ್ವರಾ.