ವಚನ - 1482     
 
ಲಿಂಗವನರಿಯದೆ ಏನನರಿದಡೆಯೂ ಫಲವಿಲ್ಲ, ಲಿಂಗವನರಿದ ಬಳಿಕ ಮತ್ತೇನನರಿದಡೆಯೂ ಫಲವಿಲ್ಲ. ಸರ್ವಕಾರಣ ಲಿಂಗವಾಗಿ, ಲಿಂಗವನೆ ಅರಿದರಿದು ಲಿಂಗಸಂಗವನೆ ಮಾಡುವೆ. ಸಂಗಸುಖದೊಳು ಓಲಾಡುವೆ ಗುಹೇಶ್ವರಾ