ವಚನ - 1485     
 
ಲಿಂಗವೆ ಕರಲಿಂಗವೆ ನುತಿವೆತ್ತ ಗುರುವಿತ್ತ- ಅಂಗವೆ ತನುಕರಣ ಕಣು ಮನವು ಕರವೆನಿಸೆ ಮಂಗಳವು ಯೋಗದೊಳು ಸಮರಸದಿ ಷಟ್‍ಚಕ್ರ ಲಿಂಗೈಕ್ಯವಿರ್ವಗೆಯ ಕುಂಭಕ ಸಮಾಧಿಯೊಳು ಕುಂಡಲಿಯ ಕುಣಿಕೆ ಗುಹ್ಯ. ಲಿಂಗ ಬಿಂದುವೆ ನಾದ ಲಿಂಗವೆ ಸುಷುಮ್ನಾಗ್ರ- ಲಿಂಗತನುವೀಡಾಡಿ ಸಂಗದೆರಕದೊಳಾಳೆ ಗುಹ್ಯತಮ ಗುಹೇಶ್ವರ.