Index   ವಚನ - 15    Search  
 
ಎನ್ನ ಇಪ್ಪತ್ತೈದಕ್ಷರ ಸ್ವರೂಪವನೊಳಕೊಂಡು ಎನ್ನ ಜ್ಞಾತೃವಿನಲ್ಲಿ ಸಂಗವಾದನಯ್ಯ ಬಸವಣ್ಣ. ಎನ್ನ ದಶಾಕ್ಷರ ಸ್ವರೂಪವನೊಳಕೊಂಡು ಎನ್ನ ಜ್ಞಾನದಲ್ಲಿ ಸಂಗವಾದನಯ್ಯ ಚೆನ್ನಬಸವಣ್ಣ. ಎನ್ನ ಏಕಾಕ್ಷರ ಸ್ವರೂಪವನೊಳಕೊಂಡು ಎನ್ನ ಜ್ಞೇಯದಲ್ಲಿ ಸಂಗವಾದನಯ್ಯ ಪ್ರಭುದೇವರು. ಇಂತೀ ತ್ರಿವಿಧವನು ಸಿದ್ಧೇಶ್ವರನು ಇಷ್ಟಲಿಂಗದಲ್ಲಿ ಸಂಬಂಧಿಸಿಕೊಟ್ಟ ಕಾರಣ ಎನ್ನ ಜ್ಞಾತೃ ಜ್ಞಾನ ಜ್ಞೇಯವೆಂಬ ತ್ರಿವಿಧವರತು, ಪರಂಜ್ಯೋತಿ ಮಹಾಲಿಂಗಗುರು ಸಿದ್ಧಲಿಂಗ ಪ್ರಭುವಿನಲ್ಲಿ ಮೇರೆದಪ್ಪಿದ ಸಮುದ್ರದಲ್ಲಿ ಅದ್ದಿದಂತಾದೆನಯ್ಯ, ಬೋಳಬಸವೇಶ್ವರ ನಿಮ್ಮ ಧರ್ಮ ನಿಮ್ಮ ಧರ್ಮ.