Index   ವಚನ - 16    Search  
 
ಅಯ್ಯಾ ತತ್ವ ವಿತತ್ವ ಶೂನ್ಯ ಮಹಾಶೂನ್ಯವಿಲ್ಲದಂದು, ಬ್ರಹ್ಮ ವಿಷ್ಣು ರುದ್ರ ಇನ ಶಶಿ ವ್ಯೋಮ ಸಮೀರ ಅಗ್ನಿ ಅಂಬು ಪೃಥ್ವಿ ನವಗ್ರಹ ದಶದಿಕ್ಕು ಛತ್ತೀಸ ತತ್ತ್ವಂಗಳೇನೂ ಇಲ್ಲದಂದು, ತಾರಜ ತಂಡಜ ಬಿಂದುಜ ಭಿನ್ನಾಯುಕ್ತ ಅವ್ಯಕ್ತ [ಅಮದಾಯುಕ್ತ ಮಣಿರಣ ಮಾನ್ಯರಣ] ವಿಶ್ವರಣ ವಿಶ್ವಾವಸು ಅಲಂಕೃತ ಕೃತಯುಗ ತ್ರೇತಾಯುಗ ದ್ವಾಪರ ಕಲಿಯುಗ ಇಂತಿವು ಯಾವವೂ ಇಲ್ಲದಂದು, ನಾದ ಬಿಂದು ಕಳೆಗಳಿಲ್ಲದಂದು, ಪಶು ಪಾಶ ಪತಿ ಕುಂಡಲಿ ಕಾರಕ ಇವೇನೂ ಇಲ್ಲದಂದು, ವಿಜ್ಞಾನಾಲಕರು ಸಕಲಾಕಲರು ಪ್ರಳಯಾಕಲರು ಇವೇನೂ ಇಲ್ಲದಂದು, ದನುಜ ಮನುಜ ದಿವಿಜ ಮನು ಮುನಿ ನಕ್ಷತ್ರಮಂಡಲ ಇವೇನೂ ಇಲ್ಲದಂದು, ಅಂದು ನೀನು ನಿಷ್ಕಲ ನಿರವಯ ನಿಃಶೂನ್ಯನಾಗಿರ್ದೆಯಯ್ಯ ಬಸವಣ್ಣ. ನೀವೊಂದು ಅನಂತಕಾಲ ಅನಂತಯುಗ ನಿಮ್ಮ ಲೀಲಾ ವಿಚಿಂತನೆ ನೆನೆದ ನೆನಹೇ ಸುನಾದ. ಆ ಸುನಾದದ ಪ್ರಕಾಶ ತೇಜೋಪುಂಜವೇ ಬಿಂದು. ನಾದವೇ ನಿರಂಜನ. ಬಿಂದುವೇ ನಿರಾಲಂಬ..... ಕೂಟವೇ ನಿರಾಮಯ. ಇಂತೀ ನಾದ ಬಿಂದು ಕಳೆ ಮೂರು ಕೂಡೆ ಅಖಂಡ ತೇಜೋಮಯವಾಗಿ ಷಡ್ ಬ್ರಹ್ಮಸ್ವರೂಪವನೈದಿದೆಯಲ್ಲ ಬಸವಣ್ಣ. ನಿನ್ನ ವಿನೋದದಿಂದ ಆ ಷಡ್ ಬ್ರಹ್ಮದಿಂದ ಷಡ್ವಿಧ ಭೂತಂಗಳು ಪುಟ್ಟಿ ಆ ಷಡ್ವಿಧಭೂತಂಗಳೇ ಎನಗಂಗವಾದಲ್ಲಿ ಆ ಷಡ್ ಬ್ರಹ್ಮವೇ ಷಡಕ್ಷರಿಮಯವಾಗಿ ಆ ಷಡ್ವಿಧಭೂತಂಗಳೊಳಗೆ ಸಮೇತವಾಗಿ ಕೂಡಿ ಛತ್ತೀಸತತ್ವ ಮಂತ್ರಸ್ವರೂಪವಾದ ಭೇದ ಹೇಗೆಂದಡೆ ಅದಕ್ಕೆ ವಿವರ: ಓಂಕಾರವೇ ಆತ್ಮನು. ಓಂಕಾರ ಯಕಾರ ಸಂಯೋಗವಾದಲ್ಲಿ ಆಕಾಶ ಪುಟ್ಟಿತ್ತು. ಓಂಕಾರ ವಾಕಾರ ಸಂಯೋಗವಾದಲ್ಲಿ ವಾಯು ಪುಟ್ಟಿತ್ತು. ಓಂಕಾರ ಶಿಕಾರ ಸಂಯೋಗದಲ್ಲಿ ಅಗ್ನಿ ಪುಟ್ಟಿತ್ತು. ಓಂಕಾರ ಮಃಕಾರ ಸಂಯೋಗದಲ್ಲಿ ಅಪ್ಪು ಪುಟ್ಟಿತ್ತು. ಓಂಕಾರ ನಕಾರ ಸಂಯೋಗವಾದಲ್ಲಿ ಪೃಥ್ವಿ ಪುಟ್ಟಿತ್ತು. ಇನ್ನು ಯಕಾರ ಓಂಕಾರ ಸಂಯೋಗವಾದಲ್ಲಿ ಭಾವ ಪುಟ್ಟಿತ್ತು. ಯಕಾರವೇ ಜ್ಞಾನ. ಯಕಾರ ವಾಕಾರ ಸಂಯೋಗವಾದಲ್ಲಿ ಮನ ಪುಟ್ಟಿತ್ತು. ಯಕಾರ ಶಿಕಾರ ಸಂಯೋಗವಾದಲ್ಲಿ ಅಹಂಕಾರ ಪುಟ್ಟಿತ್ತು. ಯಕಾರ ಮಃಕಾರ ಸಂಯೋಗವಾದಲ್ಲಿ ಬುದ್ಧಿ ಪುಟ್ಟಿತ್ತು. ಯಕಾರ ನಕಾರ ಸಂಯೋಗವಾದಲ್ಲಿ ಚಿತ್ತು ಪುಟ್ಟಿತ್ತು. ಇನ್ನು ವಕಾರ ಓಂಕಾರ ಸಂಯೋಗವಾದಲ್ಲಿ ಪಂಚವಾಯು ಪುಟ್ಟಿದವು. ವಕಾರ ಯಕಾರ ಸಂಯೋಗವಾದಲ್ಲಿ ಸಮಾನವಾಯು ಪುಟ್ಟಿತ್ತು. ವಾಕಾರ ತಾನೇ ಉದಾನವಾಯು. ವಕಾರ ಶಿಕಾರ ಸಂಯೋಗವಾದಲ್ಲಿ ವ್ಯಾನವಾಯು ಪುಟ್ಟಿತ್ತು. ವಕಾರ ಮಃಕಾರ ಸಂಯೋಗವಾದಲ್ಲಿ ಅಪಾನವಾಯು ಪುಟ್ಟಿತ್ತು. ವಕಾರ ನಕಾರ ಸಂಯೋಗವಾದಲ್ಲಿ ಪ್ರಾಣವಾಯು ಪುಟ್ಟಿತ್ತು. ಇನ್ನು ಶಿಕಾರ ಓಂಕಾರ ಸಂಯೋಗವಾದಲ್ಲಿ ಹೃದಯ ಪುಟ್ಟಿತ್ತು. ಶಿಕಾರ ಯಕಾರ ಸಂಯೋಗವಾದಲ್ಲಿ ಶ್ರೋತ್ರ ಪುಟ್ಟಿತ್ತು. ಶಿಕಾರ ವಾಕಾರ ಸಂಯೋಗವಾದಲ್ಲಿ ತ್ವಕ್ಕು ಪುಟ್ಟಿತ್ತು. ಶಿಕಾರ ತಾನೇ ನೇತ್ರ ಶಿಕಾರ ಮಃಕಾರ ಸಂಯೋಗವಾದಲ್ಲಿ ಜಿಹ್ವೆ ಪುಟ್ಟಿತ್ತು. ಶಿಕಾರ ನಕಾರ ಸಂಯೋಗವಾದಲ್ಲಿ ಘ್ರಾಣ ಪುಟ್ಟಿತ್ತು. ಇನ್ನು ಮಃಕಾರ ಓಂಕಾರ ಸಂಯೋಗವಾದಲ್ಲಿ ತೃಪ್ತಿ ಪುಟ್ಟಿತ್ತು. ಮಕಾರ ಯಕಾರ ಸಂಯೋಗವಾದಲ್ಲಿ ಶಬ್ದ ಪುಟ್ಟಿತ್ತು. ಮಕಾರ ವಾಕಾರ ಸಂಯೋಗವಾದಲ್ಲಿ ಸ್ಪರ್ಶನ ಪುಟ್ಟಿತ್ತು. ಮಕಾರ ಶಿಕಾರ ಸಂಯೋಗವಾದಲ್ಲಿ ರೂಪು ಪುಟ್ಟಿತ್ತು. ಮಃಕಾರ ತಾನೇ ರಸ. ಮಕಾರ ನಕಾರ ಸಂಯೋಗವಾದಲ್ಲಿ ಗಂಧ ಪುಟ್ಟಿತ್ತು. ಇನ್ನು ನಕಾರ ಓಂಕಾರ ಸಂಯೋಗವಾದಲ್ಲಿ ಅಂತರ್ವಾಕ್ಕು ಪುಟ್ಟಿತ್ತು. ನಕಾರ ಯಕಾರ ಸಂಯೋಗವಾದಲ್ಲಿ ವಾಕ್ಕು ಪುಟ್ಟಿತ್ತು. ನಕಾರ ವಾಕಾರ ಸಂಯೋಗವಾದಲ್ಲಿ ಪಾಣಿ ಪುಟ್ಟಿತ್ತು. ನಕಾರ ಶಿಕಾರ ಸಂಯೋಗವಾದಲ್ಲಿ ಪಾದ ಪುಟ್ಟಿತ್ತು. ನಕಾರ ಮಃಕಾರ ಸಂಯೋಗವಾದಲ್ಲಿ ಗುಹ್ಯ ಪುಟ್ಟಿತ್ತು. ನಕಾರ ತಾನೇ ವಾಯು. ಇಂತೀ ಛತ್ತೀಸತತ್ವವೆಲ್ಲ ಮಂತ್ರಸ್ವರೂಪವಾದ ಬಸವಣ್ಣನೇ. ಎನಗೆ ಅಂಗ ಲಿಂಗ ಹಸ್ತ ಮುಖ ಶಕ್ತಿ ಭಕ್ತಿ ಪದಾರ್ಥ ಪ್ರಸಾದ ಇಂತಿವೆಲ್ಲವನರಿದು ಅರ್ಪಿಸುವ ಭೇದ ಹೇಗೆಂದಡೆ ಪ್ರಮಥದಲ್ಲಿ ಷಟ್ ಸ್ಥಲದ ವಿವರ: ಭಕ್ತ ಮಾಹೇಶ್ವರ ಪ್ರಸಾದಿ ಪ್ರಾಣಲಿಂಗಿ ಶರಣ ಐಕ್ಯ. ಇನ್ನು ಭಕ್ತನ ಷಡ್ವಿಧಲಿಂಗದ ವಿವರ: ಆಚಾರಲಿಂಗ ಗುರುಲಿಂಗ ಶಿವಲಿಂಗ ಜಂಗಮಲಿಂಗ ಪ್ರಸಾದಲಿಂಗ ಮಹಾಲಿಂಗ. ಇನ್ನು ಭಕ್ತನ ಷಡ್ವಿಧಹಸ್ತದ ವಿವರ: ಸುಚಿತ್ತ ಸುಬುದ್ಧಿ ನಿರಹಂಕಾರ ಸುಮನ ಸುಜ್ಞಾನ ಸದ್ಭಾವ. ಇನ್ನು ಭಕ್ತನ ಷಡ್ವಿಧಮುಖದ ವಿವರ: ಘ್ರಾಣ ಜಿಹ್ವೆ ನೇತ್ರ ತ್ವಕ್ಕು ಶ್ರೋತ್ರ ಹೃದಯ. ಇನ್ನು ಭಕ್ತನ ಷಡ್ವಿಧಶಕ್ತಿಯ ವಿವರ: ಶ್ರದ್ಧೆ ನೈಷ್ಠೆ ಸಾವಧಾನ ಅನುಭಾವ ಆನಂದ ಸಮರಸ. ಇನ್ನು ಭಕ್ತನ ಷಡ್ವಿಧಪದಾರ್ಥದ ವಿವರ: ಗಂಧ ರಸ ರೂಪು ಸ್ಪರ್ಶನ ಶಬ್ದ ಪರಿಣಾಮ. ಇನ್ನು ಭಕ್ತನ ಷಡ್ವಿಧಪ್ರಸಾದದ ವಿವರ: ಗಂಧಪ್ರಸಾದ ರಸಪ್ರಸಾದ ರೂಪುಪ್ರಸಾದ ಸ್ಪರ್ಶಪ್ರಸಾದ ಶಬ್ದಪ್ರಸಾದ ಪರಿಣಾಮಪ್ರಸಾದ. ಇನ್ನು ದ್ವಿತೀಯದಲ್ಲಿ ಮಾಹೇಶ್ವರನ ಷಟ್ ಸ್ಥಲ ವಿವರ: ಮಾಹೇಶ್ವರ ಭಕ್ತ ಪ್ರಸಾದಿ ಪ್ರಾಣಲಿಂಗಿ ಶರಣ ಐಕ್ಯ. ಇನ್ನು ಮಾಹೇಶ್ವರನ ಷಡ್ವಿಧಲಿಂಗದ ವಿವರ: ಗುರುಲಿಂಗ ಆಚಾರಲಿಂಗ ಶಿವಲಿಂಗ ಜಂಗಮಲಿಂಗ ಪ್ರಸಾದಲಿಂಗ ಮಹಾಲಿಂಗ. ಇನ್ನು ಮಾಹೇಶ್ವರನ ಷಡ್ವಿಧಹಸ್ತದ ವಿವರ: ಸುಬುದ್ಧಿ ಸುಚಿತ್ತ ನಿರಹಂಕಾರ ಸುಮನ ಸುಜ್ಞಾನ ಸದ್ಭಾವ. ಇನ್ನು ಮಾಹೇಶ್ವರನ ಷಡ್ವಿಧಮುಖದ ವಿವರ: ಜಿಹ್ವೆ ಘ್ರಾಣ ನೇತ್ರ ತ್ವಕ್ಕು ಶ್ರೋತ್ರ ಹೃದಯ. ಇನ್ನು ಮಾಹೇಶ್ವರನ ಷಡ್ವಿಧಶಕ್ತಿಯ ವಿವರ: ಜ್ಞಾನಶಕ್ತಿ ಕ್ರಿಯಾಶಕ್ತಿ ಇಚ್ಛಾಶಕ್ತಿ ಆದಿಶಕ್ತಿ ಪರಾಶಕ್ತಿ ಚಿತ್ಶಕ್ತಿ. ಇನ್ನು ಮಾಹೇಶ್ವರನ ಷಡ್ವಿಧಭಕ್ತಿಯ ವಿವರ: ನೈಷ್ಠೆ ಶ್ರದ್ಧೆ ಸಾವಧಾನ ಅನುಭಾವ ಆನಂದ ಸಮರಸ. ಇನ್ನು ಮಾಹೇಶ್ವರನ ಷಡ್ವಿಧಪದಾರ್ಥದ ವಿವರ: ರಸ ಗಂಧ ರೂಪು ಸ್ಪರುಶನ ಶಬ್ದ ಪರಿಣಾಮ ಇನ್ನು ಮಾಹೇಶ್ವರನ ಷಡ್ವಿಧಪ್ರಸಾದದ ವಿವರ: ರಸಪ್ರಸಾದ ಗಂಧಪ್ರಸಾದ ರೂಪುಪ್ರಸಾದ ಸ್ಪರುಶನಪ್ರಸಾದ ಶಬ್ದಪ್ರಸಾದ ಪರಿಣಾಮಪ್ರಸಾದ. ಇನ್ನು ತೃತೀಯದಲ್ಲಿ ಪ್ರಸಾದಿಯ ಷಟ್ ಸ್ಥಲದ ವಿವರ: ಪ್ರಸಾದಿ ಭಕ್ತ ಮಾಹೇಶ್ವರ ಪ್ರಾಣಲಿಂಗಿ ಶರಣ ಐಕ್ಯ. ಇನ್ನು ಪ್ರಸಾದಿಯ ಷಡ್ವಿಧಲಿಂಗದ ವಿವರ: ಶಿವಲಿಂಗ ಆಚಾರಲಿಂಗ ಗುರುಲಿಂಗ ಜಂಗಮಲಿಂಗ ಪ್ರಸಾದಲಿಂಗ ಮಹಾಲಿಂಗ. ಇನ್ನು ಪ್ರಸಾದಿಯ ಷಡ್ವಿದಹಸ್ತದ ವಿವರ: ನಿರಹಂಕಾರ ಸುಚಿತ್ತ ಸುಬುದ್ಧಿ ಸುಮನ ಸುಜ್ಞಾನ ಸದ್ಭಾವ. ಇನ್ನು ಪ್ರಸಾದಿಯ ಷಡ್ವಿಧಮುಖದ ವಿವರ: ನೇತ್ರ ಘ್ರಾಣ ಜಿಹ್ವೆ ತ್ವಕ್ಕು ಶ್ರೋತ್ರ ಹೃದಯ. ಇನ್ನು ಪ್ರಸಾದಿಯ ಷಡ್ವಿಧಶಕ್ತಿಯ ವಿವರ: ಇಚ್ಛಾಶಕ್ತಿ ಕ್ರಿಯಾಶಕ್ತಿ ಜ್ಞಾನಶಕ್ತಿ ಆದಿಶಕ್ತಿ ಪರಾಶಕ್ತಿ ಚಿತ್ಶಕ್ತಿ. ಇನ್ನು ಪ್ರಸಾದಿಯ ಷಡ್ವಿಧಭಕ್ತಿಯ ವಿವರ: ಸಾವಧಾನ ಶ್ರದ್ಧೆ ನೈಷ್ಠೆ ಅನುಭಾವ ಆನಂದ ಸಮರಸ. ಇನ್ನು ಪ್ರಸಾದಿಯ ಷಡ್ವಿಧಪದಾರ್ಥದ ವಿವರ: ರೂಪು ಗಂಧ ರಸ ಸ್ಪರುಶನ ಶಬ್ದ ಪರಿಣಾಮ. ಇನ್ನು ಪ್ರಸಾದಿಯ ಷಡ್ವಿಧಪ್ರಸಾದದ ವಿವರ: ರೂಪು ಪ್ರಸಾದ ಗಂಧ ಪ್ರಸಾದ ರಸ ಪ್ರಸಾದ ಸ್ಪರುಶನ ಪ್ರಸಾದ ಶಬ್ದ ಪ್ರಸಾದ ಪರಿಣಾಮ ಪ್ರಸಾದ. ಇಂತೀ ಮಾರ್ಗಕ್ರಿ ಅಂಗ ಲಿಂಗವಾದಲ್ಲಿ ಮುಂದೆ ಮೀರಿದ ಕ್ರೀಯೆ ಅಂಗ ಲಿಂಗ ತೃತೀಯ ಸ್ಥಲ. ಇನ್ನು ಚತುರ್ಥದಲ್ಲಿ ಪ್ರಾಣಲಿಂಗಿಯ ಷಡ್ವಿಧ ವಿವರ: ಪ್ರಾಣಲಿಂಗಿ ಭಕ್ತ ಮಾಹೇಶ್ವರ ಪ್ರಸಾದಿ ಶರಣ ಐಕ್ಯ. ಇನ್ನು ಪ್ರಾಣಲಿಂಗಿಯ ಷಡ್ವಿಧಲಿಂಗದ ವಿವರ: ಜಂಗಮಲಿಂಗ ಆಚಾರಲಿಂಗ ಗುರುಲಿಂಗ ಶಿವಲಿಂಗ ಪ್ರಸಾದಲಿಂಗ ಮಹಾಲಿಂಗ. ಇನ್ನು ಪ್ರಾಣಲಿಂಗಿಯ ಷಡ್ವಿಧಹಸ್ತದ ವಿವರ: ಸುಮನ ಸುಚಿತ್ತ ಸುಬುದ್ಧಿ ನಿರಹಂಕಾರ ಸುಜ್ಞಾನ ಸದ್ಭಾವ. ಇನ್ನು ಪ್ರಾಣಲಿಂಗಿಯ ಷಡ್ವಿಧಶಕ್ತಿಯ ವಿವರ: ಆದಿಶಕ್ತಿ ಕ್ರಿಯಾಶಕ್ತಿ ಜ್ಞಾನಶಕ್ತಿ ಇಚ್ಛಾಶಕ್ತಿ ಪರಾಶಕ್ತಿ ಚಿತ್ಶಕ್ತಿ. ಇನ್ನು ಪ್ರಾಣಲಿಂಗಿಯ ಷಡ್ವಿಧಭಕ್ತಿಯ ವಿವರ: ಅನುಭಾವ ಶ್ರದ್ಧೆ ನೈಷ್ಠೆ ಸಾವಧಾನ ಆನಂದ ಸಮರಸ. ಇನ್ನು ಪ್ರಾಣಲಿಂಗಿಯ ಷಡ್ವಿಧಪದಾರ್ಥದ ವಿವರ: ಸ್ಪರುಶನ ಗಂಧ ರಸ ರೂಪು ಶಬ್ದ ಪರಿಣಾಮ. ಇನ್ನು ಪ್ರಾಣಲಿಂಗಿಯ ಷಡ್ವಿಧಪ್ರಸಾದದ ವಿವರ: ಸ್ಫರುಶನಪ್ರಸಾದ ಗಂಧಪ್ರಸಾದ ರಸಪ್ರಸಾದ ರೂಪುಪ್ರಸಾದ ಶಬ್ದಪ್ರಸಾದ ಪರಿಣಾಮಪ್ರಸಾದ. ಇನ್ನು ಪಂಚಮದಲ್ಲಿ ಶರಣನಷಟ್ ಸ್ಥಲದ ವಿವರ: ಶರಣ ಭಕ್ತ ಮಾಹೇಶ್ವರ ಪ್ರಸಾದಿ ಪ್ರಾಣಲಿಂಗಿ ಐಕ್ಯ. ಇನ್ನು ಶರಣನ ಷಡ್ವಿಧಲಿಂಗದ ವಿವರ: ಪ್ರಸಾದಲಿಂಗ ಆಚಾರಲಿಂಗ ಗುರುಲಿಂಗ ಶಿವಲಿಂಗ ಜಂಗಮಲಿಂಗ ಮಹಾಲಿಂಗ. ಶರಣನ ಷಡ್ವಿಧಹಸ್ತದ ವಿವರ: ಸುಜ್ಞಾನ ಸುಚಿತ್ತ ಸುಬುದ್ಧಿ ನಿರಂಕಾರ ಸುಮನ ಸದ್ಭಾವ ಇನ್ನು ಶರಣನ ಷಡ್ವಿಧಮುಖದ ವಿವರ: ಶ್ರೋತ್ರ ಘ್ರಾಣ ಜಿಹ್ವೆ ನೇತ್ರ ತ್ವಕ್ಕು ಹೃದಯ. ಇನ್ನು ಶರಣನ ಷಡ್ವಿಧಶಕ್ತಿಯ ವಿವರ: ಪರಾಶಕ್ತಿ ಕ್ರಿಯಾಶಕ್ತಿ ಜ್ಞಾನಶಕ್ತಿ ಇಚ್ಛಾಶಕ್ತಿ ಆದಿಶಕ್ತಿ ಚಿತ್ಶಕ್ತಿ. ಇನ್ನು ಶರಣನ ಷಡ್ವಿಧಭಕ್ತಿಯ ವಿವರ: ಆನಂದ ಶ್ರದ್ಧೆ ನೈಷ್ಠೆ ಸಾವಧಾನ ಅನುಭಾವ ಸಮರಸ. ಇನ್ನು ಶರಣನ ಷಡ್ವಿಧ ಪ್ರಸಾದದ ವಿವರ: ಶಬ್ದಪ್ರಸಾದ ಗಂಧ